alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಯುವಕ, ಯುವತಿ

road-acciden

ಬೆಂಗಳೂರು: ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೂದಿಹಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದಾಗಿ ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಅಪಘಾತಕ್ಕೀಡಾಗಿದ್ದ ವಾಹನಗಳನ್ನು ತೆರವುಗೊಳಿಸಿದ ಬಳಿಕ ಸಂಚಾರ ವ್ಯವಸ್ಥೆ ಸರಿಯಾಗಿದೆ .

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...