alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಸ್ವಾಮೀಜಿ

road-accident 55

ರಸ್ತೆ ಅಪಘಾತದಲ್ಲಿ ಸ್ವಾಮೀಜಿಯೊಬ್ಬರು ಮೃತಪಟ್ಟ ಘಟನೆ ಅರಸೀಕೆರೆ ಸಮೀಪ ನಡೆದಿದೆ. ಮಾಡಾಳು ಬೂದಿಹಾಳ ವಿರಕ್ತ ಮಠದ ಶ್ರೀಗಳಾದ ರಾಜಶೇಖರ ಸ್ವಾಮೀಜಿ ಮೃತಪಟ್ಟವರು. ಅವರಿಗೆ 49 ವರ್ಷ ವಯಸ್ಸಾಗಿತ್ತು.

ಅರಸೀಕೆರೆ ಸಮೀಪದ ಗೊಲ್ಲರಹಳ್ಳಿಯಲ್ಲಿ ಸೇತುವೆಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ರಾಜಶೇಖರ ಸ್ವಾಮೀಜಿ ಅವರು ಕಂಚುಗಲ್ ಬಿದರೆ ಮಠದ ಶ್ರೀಗಳನ್ನು ಮಠಕ್ಕೆ ಬಿಟ್ಟು ವಾಪಸ್ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಅರಸೀಕೆರೆ ಗೊಲ್ಲರಹಳ್ಳಿ ಬಳಿ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ವಾಮೀಜಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ವಾಮೀಜಿ ನಿಧನದ ಸುದ್ದಿ ತಿಳಿಯುತ್ತಲೇ ಭಕ್ತರು ಮಠಕ್ಕೆ ಧಾವಿಸಿ ಬಂದರು.

ಅರಸೀಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ನಂತರ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...