alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಡ್ ಫ್ರೈಡೇ: ಅಪಘಾತದಲ್ಲಿ 18 ಮಂದಿ ದಾರುಣ ಸಾವು

accident 80 mk

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ ಬರೋಬ್ಬರಿ 18 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ 3 ಸ್ಥಳಗಳಲ್ಲಿ ನಡೆದ ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ 18 ಜನ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಸಮೀಪದ ಕೊಡಗನ ಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಘಟನೆ ನಡೆದಿದೆ. ಟಾಟಾ ಏಸ್ ನಲ್ಲಿ ಹೋಗುತ್ತಿದ್ದವರ ಮೇಲೆ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ಸಂದರ್ಭದಲ್ಲಿ ಟಾಟಾ ಏಸ್ ನಲ್ಲಿದ್ದ ಕುಮಾರ್, ನಾಗರಾಜ್, ಗಂಗಮ್ಮ, ಮಂಜುನಾಥ್, ಸುದೀಪ್ ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಇವರೆಲ್ಲಾ ಚಿಕ್ಕಗೊಂಡನಹಳ್ಳಿಯಿಂದ ಟಾಟಾ ಏಸ್ ನಲ್ಲಿ ಸಿಬಾರ ಗ್ರಾಮಕ್ಕೆ ಹೊರಟಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಮೀಪ ಆಲ್ಟೋ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಯಕೀರ್ತಿ, ಪ್ರಶಾಂತ್ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಅದೇ ರೀತಿ, ಗದಗ ಜಿಲ್ಲೆಯಲ್ಲಿ ನಡೆದ ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...