alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 6 ಮಂದಿ ದಾರುಣ ಸಾವು

accidents26

ವಿಜಯಪುರ: ಟ್ರ್ಯಾಕ್ಟರ್ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ, ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, 6 ಮಂದಿ ಮೃತಪಟ್ಟ ಘಟನೆ, ವಿಜಯಪುರ ಜಿಲ್ಲೆಯ ಹೊರ್ತಿತಾಂಡ-2 ರ ಸಮೀಪ, ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇಂದು ಬೆಳಗಿನ ಜಾವ ನಡೆದಿದೆ.

ಮೃತರು ಮಹಾರಾಷ್ಟ್ರದ ಕೂಲಿ ಕಾರ್ಮಿಕರಾಗಿದ್ದು, ಕಬ್ಬು ಕಟಾವು ಕೆಲಸಕ್ಕೆ ಬಂದಿದ್ದರು. ಇವರೆಲ್ಲಾ ಗಲಗಲಿ ಎಂಬಲ್ಲಿ ಕಬ್ಬು ಕಟಾವು ಮುಗಿಸಿ ಮಹಾರಾಷ್ಟ್ರದ ಬೀಡ್ ಪರ್ಬನಿ ಜಿಲ್ಲೆಗೆ ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದರು. ಈ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಮಲ್, ಬಿರಾಜ್, ಮುಮ್ತಾಜ್ ಮೈರೂನ್ ಸೇರಿದಂತೆ 6 ಮಂದಿ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಹೊರ್ತಿ ತಾಂಡ ಸಮೀಪ ಟ್ರ್ಯಾಕ್ಟರ್ ಹೋಗುತ್ತಿದ್ದ ಸಂದರ್ಭದಲ್ಲಿ, ಅತಿವೇಗವಾಗಿ ಬಂದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ, ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...