alex Certify
ಕನ್ನಡ ದುನಿಯಾ       Mobile App
       

Kannada Duniya

ಡಸ್ಟರ್ ಕಾರಿಗೆ ಸಿಲುಕಿ ದುರಂತ ಸಾವು

accident-sign8520

ಅತಿವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವು ಕಂಡ ಘಟನೆ ರಾಮನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಅಂಚೇ ಪಾಳ್ಯ ಸಮೀಪ ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಡಸ್ಟರ್ ಕಾರು ಹರಿದು ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೇಣುಕಪ್ಪ, ಸರೋಜಮ್ಮ ಹಾಗೂ ಗಂಗಮ್ಮ ಮೃತಪಟ್ಟವರು. ಇವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿದ್ದು, ಅಲ್ಲಿಂದ ಊರಿಗೆ ವಾಪಸ್ ಬರುತ್ತಿದ್ದರು. ಮಾಗಡಿ ಸಮೀಪದ ಅಂಚೇಹಳ್ಳಿ ಬಳಿ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಡಾಬಾಕ್ಕೆ ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಡಸ್ಟರ್ ಕಾರ್ ಡಿಕ್ಕಿಹೊಡೆದು ಪರಾರಿಯಾಗಿದೆ. ಮೂರೂ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ರಸ್ತೆ ದಾಟುತ್ತಿದ್ದ ಪಾದಚಾರಿಗಳು ಕಾರಿಗೆ ಬಲಿಯಾಗಿದ್ದರಿಂದ ಅಲ್ಲಿದ್ದವರು ಏನಾಗಿದೆ ಎಂದು ನೋಡುವಷ್ಟರಲ್ಲಿ ಕಾರು ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ಭಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...