alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ

accident ag 9ಮರಳು ತುಂಬಿದ್ದ ಲಾರಿಯೊಂದು ಇಂದು ಸರಣಿ ಅಪಘಾತಕ್ಕೆ ಕಾರಣವಾದ ಪರಿಣಾಮ ಓರ್ವ ಸಾವನ್ನಪ್ಪಿ ಆರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಸುಂಕದಕಟ್ಟೆ ಕಡೆಯಿಂದ ಬರುತ್ತಿದ್ದ ಮರಳು ತುಂಬಿದ್ದ ಲಾರಿ, ಕೊಟ್ಟಿಗೆ ಪಾಳ್ಯದ ಸಿಗ್ನಲ್ ಬಳಿ ಬ್ರೇಕ್ ಫೇಲ್ ಆದ ಕಾರಣ ಎರಡು ಕಾರು, ಎರಡು ದ್ವಿಚಕ್ರ ವಾಹನ, ಟಾಟಾ ಏಸ್ ಹಾಗೂ ಜಲ್ಲಿ ತುಂಬಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದು, ಚಾಲಕನ ಎರಡೂ ಕಾಲು ತುಂಡಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಇನ್ನೂ ಐದು ಮಂದಿ ಗಾಯಗೊಂಡಿದ್ದು, ಅವರುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೀಡಾಗಿರುವ ವಾಹನಗಳ ತೆರವು ಕಾರ್ಯ ಆರಂಭಿಸಿದ್ದಾರೆ. ಅಪಘಾತದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...