alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕೆ ಬಿದ್ದ ಟಂಟಂ ವಾಹನ: 10 ಮಂದಿಗೆ ಗಾಯ

ಜಾತ್ರೆಗೆ ತೆರಳಿದ್ದ ಗ್ರಾಮಸ್ಥರು ವಾಪಸ್ ಆಗುತ್ತಿದ್ದಾಗ ಟಂಟಂ ವಾಹನ, ಚಾಲಕನ ನಿಯಂತ್ರಣ ತಪ್ಪಿ, ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಮಂದಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ನಡೆದಿದೆ.

ಗಾಯಾಳುಗಳು ಗದಗದ ಬೆಳದಡಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಓರ್ವ ಬಾಲಕ ಹಾಗೂ ಮತ್ತಿಬ್ಬರು ಮಹಿಳೆಯರಿಗೆ ಗಂಭೀರವಾದ ಗಾಯಗಳಾಗಿವೆ.

ಕಪ್ಪತ್ತಗುಡ್ಡದ ಕಪ್ಪತ್ತಮಲ್ಲಯ್ಯ ಜಾತ್ರೆ ಮುಗಿಸಿಕೊಂಡು ಬರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಇದೇ ವೇಳೆ ಕಪ್ಪತ್ತಗುಡ್ಡದಲ್ಲಿ ಮೊಬೈಲ್ ನೆಟ್ ವರ್ಕ್ ಸಿಗದ ಕಾರಣ ಅಂಬ್ಯುಲೆನ್ಸ್ ಗೆ ಕರೆ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿತ್ತೆನ್ನಲಾಗಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...