alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೆಂಕಿ

Accident1-1451719643

ಶಿವಮೊಗ್ಗ: ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಮಾಚೇನಹಳ್ಳಿ ಸಮೀಪ ಶಿಮುಲ್ ಎದುರು ನಡೆದಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೆಂಕಿ ಹಚ್ಚಿ, 3 ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ನಿನ್ನೆ ರಾತ್ರಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಾಚೇನಹಳ್ಳಿ ನಿವಾಸಿ 32 ವರ್ಷದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಇದೇ ಮಾರ್ಗದಲ್ಲಿ ರಸ್ತೆ ಅಪಘಾತ ಸಂಭವಿಸಿತ್ತು. ಇದರೊಂದಿಗೆ ಸರ್ಕಾರಿ ಬಸ್ ಚಾಲಕನ ಬೇಜವಾಬ್ದಾರಿ ಚಾಲನೆಯಿಂದಾಗಿ ಅಪಘಾತ ಸಂಭವಿಸಿದ್ದು, ಸ್ಥಳೀಯರ ಆಕ್ರೋಶಕ್ಕೂ ಕಾರಣವಾಯಿತು.

ಅಪಘಾತ ಸಂಭವಿಸಿ ಕೆಲ ಹೊತ್ತಿನಲ್ಲೆ ಸ್ಥಳೀಯರು ಬಸ್ ಚಾಲಕನ್ನು ಹಿಡಿದು ಥಳಿಸಿ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದಲ್ಲದೆ ಹಿಂದೆ ಬರುತ್ತಿದ್ದ ನಾಲ್ಕು ಬಸ್ ಗಳಿಗೂ ಕಲ್ಲು ತೂರಾಟ ನಡೆಸಿದ್ದು ಒಂದು ಸರ್ಕಾರಿ ಬಸ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...