alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಅಪಘಾತದ ಭೀಕರ ದೃಶ್ಯ

udupi-ddಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ಬಸ್ ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನಪ್ಪಿದ್ದು, ಮತ್ತೋರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ 3-30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ತನ್ನ ಮುಂದೆ ಹಿಂದೆ ಇದ್ದ ಬೈಕ್ ಓವರ್ ಟೇಕ್ ಮಾಡುವ ಭರದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಗೆ ಬಸ್ ಡಿಕ್ಕಿ ಹೊಡೆಸಿದ್ದಾನೆ.

ಇದರಿಂದಾಗಿ ಮಂಜುನಾಥ್ ಎಂಬವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ರವಿಕುಮಾರ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಾವು-ಬದುಕಿನ ನಡುವೆ ಹೋರಾಡುತ್ತಿರುವ ರವಿಕುಮಾರ್ ರನ್ನು ಕೆ ಆರ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...