alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ

accident

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯ ಕೆಇಬಿ ವೃತ್ತದ ಬಳಿ ನಡೆದಿದೆ. ಬೈಕ್ ಸವಾರರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದಾನೆ.

ಗುರುಪುರ ನಿವಾಸಿಗಳಾದ ಪ್ರಸನ್ನ (20) ಮತ್ತು ರಘು (20) ಬೈಕ್ ನಲ್ಲಿ ಬರುತ್ತಿರುವ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಇವರುಗಳನ್ನು ಕೂಡಲೇ ನಗರದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೇ ಪ್ರಸನ್ನ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ರಘುವಿನ ಕಾಲುಗಳು ತುಂಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಪೂರ್ವ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...