alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣವೇನಹಳ್ಳಿ ಬಳಿ ನಡೆದಿದೆ.

ಮೃತರು ವಳ್ಳೂರು ಗ್ರಾಮದ ಮುತ್ಯಾಲಪ್ಪ (27) ಆಂಧ್ರದ ತಗರಕುಂಟೆ ಗ್ರಾಮದ ಹನುಮಂತಪ್ಪ (45) ಹಾಗೂ ನವೀನ್‍(22) ಎಂದು ಗುರುತಿಸಲಾಗಿದೆ.

ವೆಂಕಾಟಪುರದಲ್ಲಿ ನಡೆಯುತ್ತಿದ್ದ ಮಾರಿಹಬ್ಬಕ್ಕೆಂದು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಇನ್ನು ಈ ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಕುರಿತು ಪಾವಗಡ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...