alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ವಿಭಜಕಕ್ಕೆ ಗುದ್ದಿದ ಕಾರು: ನಾಲ್ವರು ಸಾವು

ದಾವಣಗೆರೆ: ಪ್ರವಾಸಿಗರ ಕಾರೊಂದು ಡಿವೈಡರ್ ಗೆ ಡಿಕ್ಕಿಹೊಡೆದು, ಬಳಿಕ ಲಾರಿಯೊಂದಕ್ಕೆ ಗುದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಮೃತರನ್ನು ವಿನಯ್, ಸಿದ್ದಪ್ಪ, ಅಜಯ್, ಗಿರೀಶ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಕಿರಣ್‌ಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಗುದ್ದಿ ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...