alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿ: ಮೂವರ ಸಾವು

accident-2346ಪಂಕ್ಚರ್ ಆಗಿದ್ದ ಕಾರಣ ತಮ್ಮ ಬೊಲೆರೊ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿಕೊಂಡು ಪಂಕ್ಚರ್ ಹಾಕುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ನರಸಪ್ಪ ಲಮಾಣಿ (35), ಕೋಮೇಶ್ ಲಮಾಣಿ (19) ಹಾಗೂ ಗೋವಿಂದಪ್ಪ ಲಮಾಣಿ (39) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೊಲೆರೊದಲ್ಲಿದ್ದ ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇವರೆಲ್ಲರೂ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ನಾರಗೊಂಡ ಗ್ರಾಮದವರು ಎನ್ನಲಾಗಿದೆ.

ಮೆಣಸಿನ ಕಾಯಿ ಮಾರಾಟಕ್ಕಾಗಿ ಹಾವೇರಿ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...