alex Certify
ಕನ್ನಡ ದುನಿಯಾ       Mobile App
       

Kannada Duniya

ಸೇತುವೆಯಿಂದ ಕೆಳಗುರುಳಿದ ಕೆ.ಎಸ್.ಆರ್.ಟಿ.ಸಿ. ಬಸ್

ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್ ಸೇತುವೆ ಮೇಲಿಂದ ಉರುಳಿ ಬಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಸಮೀಪ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿನಲ್ಲಿ ಸಂಭವಿಸಿದೆ.

ವೇದಾವತಿ ನದಿ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಕಡೂರು ಹೊರವಲಯದ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮೂರ್ನಾಲ್ಕು ಸುತ್ತು ಉರುಳಿದ ಬಸ್, 10 ಅಡಿ ಆಳಕ್ಕೆ ಬಿದ್ದಿದೆ.

ಬೆಂಗಳೂರಿನಿಂದ ಕುಂದಾಪುರದ ಕಡೆಗೆ ಹೊರಟಿದ್ದ ಈ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕಡೂರು ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...