alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು

ತುಮಕೂರು ಜಿಲ್ಲೆ ಶಿರಾ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಸಿಗಂದೂರಿನಿಂದ ಶಿರಾ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, 20 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಸ್ ನಲ್ಲಿ 60 ಮಂದಿ ಪ್ರಯಾಣಿಕರಿದ್ದರೆಂದು ಹೇಳಲಾಗಿದ್ದು, ಮೃತರೆಲ್ಲರೂ ಶಿರಾ ಹಾಗೂ ಪಟ್ಟನಾಯಕನ ಹಳ್ಳಿಯವರೆಂದು ತಿಳಿದುಬಂದಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...