alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಸ್ತ್ರಗೊಳಿಸಿ ವಿದ್ಯಾರ್ಥಿನಿ ಮೇಲಿನ ಹಲ್ಲೆ ಪ್ರಕರಣಕ್ಕೆ ಹೊಸ ತಿರುವು

tanjenai

ಬೆಂಗಳೂರು: ಬೆಂಗಳೂರಿನ ಆಚಾರ್ಯ ಕಾಲೇಜ್ ನಲ್ಲಿ ಓದುತ್ತಿರುವ ತಾಂಜೇನಿಯಾ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ದೇಶದ ಗಮನ ಸೆಳೆದಿದ್ದು, ಪ್ರಕರಣದ ವಿವರ ನೀಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿಯವರನ್ನು ಕೇಳಿದ್ದಾರೆ.

ಬೆಂಗಳೂರಿನಲ್ಲಿ ಜನವರಿ 31 ರಂದು ನಡೆದ ಅಪಘಾತ ಪ್ರಕರಣದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ವಿದೇಶಿ ವಿದ್ಯಾರ್ಥಿಯೊಬ್ಬ ವೇಗವಾಗಿ ಕಾರು ಚಾಲನೆ ಮಾಡುವ ಮೂಲಕ ಅಪಘಾತಕ್ಕೆ ಕಾರಣವಾಗಿದ್ದಾನೆಂದು ಆಕ್ರೋಶಗೊಂಡ ಸ್ಥಳೀಯರು ಅವನನ್ನು ಥಳಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ತಪ್ಪು ಮಾಡಿರದಿದ್ದರೂ ಅಲ್ಲಿದ್ದ ಕೆಲವರು ಆಕೆಯನ್ನು ಬೆತ್ತಲೆ ಮಾಡಿ ತೀವ್ರವಾಗಿ ಥಳಿಸಿದ್ದಾರೆ. ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿ, ತಾಂಜೇನಿಯಾ ರಾಯಭಾರ ಕಚೇರಿಗೂ ಮಾಹಿತಿ ನೀಡಿದ್ದಾರೆ.

ಅಪಘಾತ ನಡೆದ ಸಂದರ್ಭದಲ್ಲಿ ವಿನಾಕಾರಣ ತಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸುಷ್ಮಾ ಸ್ವರಾಜ್ ಹಾಗೂ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿಯವರಿಂದ ಘಟನೆಯ ಬಗ್ಗೆ ವಿವರಣೆ ಕೇಳಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...