alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕೆ ಉರುಳಿದ ಕಾರು : ಶಿಕ್ಷಕಿ ಸಾವು

ಪತಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ದುರಂತ ಸಾವನ್ನಪ್ಪಿದ್ದಾರೆ. ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.

ತುಮಕೂರು ಹೊರವಲಯದ ಪೋದ್ದಾರ್ ಶಾಲೆ ಬಳಿ ದುರ್ಘಟನೆ ನಡೆದಿದ್ದು, ಶಿಕ್ಷಕಿ ವಿನುತಾ ಸಾವನ್ನಪ್ಪಿದ್ದರೆ, ಅವರ ಪತಿ ರಾಘವೇಂದ್ರ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಬಳಿಕ 20 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಮಾರುತಿ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿದ್ದ ವಿನುತಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ಪತಿ ರಾಘವೇಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...