alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಾಕ್ಟರ್ ಪಲ್ಟಿಯಾಗಿ ನಿವೃತ್ತ ಜಿಲ್ಲಾಧಿಕಾರಿ ಸಾವು

ಹೊಲದಲ್ಲಿ ಉಳುಮೆ ಮಾಡುತ್ತಿರುವ ವೇಳೆ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ನಿವೃತ್ತ ಜಿಲ್ಲಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

62 ವರ್ಷದ ಎಸ್.ಎನ್. ನಾಗರಾಜ್ ಸಾವನ್ನಪ್ಪಿದವರಾಗಿದ್ದು, ಇವರು ರಾಯಚೂರು ಜಿಲ್ಲಾಧಿಕಾರಿಯಾಗಿ 2016ರಲ್ಲಿ ನಿವೃತ್ತಿಯಾದ ನಂತರ ಬ್ಯಾಡರಹಳ್ಳಿಯ ತಮ್ಮ ತೋಟದ ಮನೆಯಲ್ಲಿ ವಾಸವಾಗಿದ್ದರು.

ಕೃಷಿಯಲ್ಲಿ ಆಸಕ್ತಿ ಹೊಂದಿದ್ದ ನಾಗರಾಜ್ ಸ್ವತಃ ತಾವೇ ಹೊಲದಲ್ಲಿ ದುಡಿಯುತ್ತಿದ್ದು, ಗುರುವಾರ ಟ್ರಾಕ್ಟರ್ ನಿಂದ ತೋಟ ಉಳುಮೆ ಮಾಡುವಾಗ ಪಲ್ಟಿಯಾಗಿದೆ. ಈ ವೇಳೆ ಟ್ರಾಕ್ಟರ್ ಅಡಿ ಸಿಲುಕಿ ನಾಗರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...