alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ದುರ್ಮರಣ

accidents a 17 mnm

ಗದಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ಸಾವಿಗೀಡಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಮಾರುತಿ ಒಮಿನಿ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಗದಗ ಸಮೀಪದ ಹರ್ಲಾಪುರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಯಲಬುರ್ಗಾ ತಾಲ್ಲೂಕಿನ ಮಂಡಲಗೇರಿಗೆ ಮದುವೆಗೆ ಹೋಗಿದ್ದವರು ಒಮಿನಿಯಲ್ಲಿ ವಾಪಸ್ ಹೊರಟಿದ್ದರು. ಇವರೆಲ್ಲಾ ಮದುವೆ ಮುಗಿಸಿಕೊಂಡು ಗದಗ ಮಾರ್ಗವಾಗಿ ತಮ್ಮ ಊರಿಗೆ ಹೊರಟಿದ್ದರೆನ್ನಲಾಗಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಡ್ಡಾದಿಡ್ಡಿಯಾಗಿ ಚಲಿಸಿ ಒಮಿನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಮಕ್ಕಳು, 6 ಮಹಿಳೆಯರು ಸೇರಿದಂತೆ, 12 ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಬಸ್ ಚಾಲಕ, ನಿರ್ವಾಹಕ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ.ಪಾಟೀಲ್, ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...