alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾಯದಿಂದ ಪಾರಾದ ಸಾಣೆಹಳ್ಳಿ ಶ್ರೀಗಳು

sanehalli swamiji

ದಾವಣಗೆರೆ: ಸಿರಿಗೆರೆ ತರಳಬಾಳು ಸಾಣೆಹಳ್ಳಿ ಶಾಖಾ ಮಠದ ಶ್ರೀಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು, ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ.

ರಾಣೆಬೆನ್ನೂರು ಸಮೀಪದ ಚಳಗೇರಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಗಾಯಗೊಂಡಿದ್ದಾರೆ. ಕಾರಿಗೆ ಬೈಕ್ ಸವಾರ ಏಕಾಏಕಿ ಅಡ್ಡಲಾಗಿ ಬಂದಿದ್ದು, ಅದನ್ನು ತಪ್ಪಿಸಲು ಕಾರ್ ಚಾಲಕ ಮುಂದಾಗಿದ್ದಾನೆ. ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನ ಹಿಂಭಾಗ ಜಖಂಗೊಂಡಿದ್ದು, ಸ್ವಾಮೀಜಿಯವರ ತಲೆ, ಮೊಣಕಾಲು, ದೇಹದ ಎಡಭಾಗಕ್ಕೆ ಪೆಟ್ಟಾಗಿದೆ ಎಂದು ಹೇಳಲಾಗಿದೆ.

ಅಪಘಾತದಲ್ಲಿ ಗಾಯಗೊಂಡ ಶ್ರೀಗಳು ಪ್ರಜ್ಞೆ ತಪ್ಪಿದ್ದು, ಕೂಡಲೇ ಅವರನ್ನು ಬೇರೆ ಕಾರಿನಲ್ಲಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಶ್ರೀಗಳು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಾವಣಗೆರೆಯಿಂದ ರಾಣೆಬೆನ್ನೂರಿಗೆ ಹೋಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...