alex Certify
ಕನ್ನಡ ದುನಿಯಾ       Mobile App
       

Kannada Duniya

ರಾಸಲೀಲೆ ವಿಡಿಯೋ : ನಟಿಗೆ ಬೆದರಿಕೆ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ಹುಣಸಮಾರನಹಳ್ಳಿಯ ಮದ್ದೇವಣಾಪುರ ಮಠದ ದಯಾನಂದ ಸ್ವಾಮಿ ಅವರ ರಾಸಲೀಲೆ ವಿಡಿಯೊ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದ ದಯಾನಂದ ಪೂರ್ವನಿಯೋಜಿತವಾಗಿ ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ವಿಡಿಯೊ ಬಹಿರಂಗಪಡಿಸುವುದಾಗಿ ಕೆಲವರು ಹಣ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ನಂತರದಲ್ಲಿ ರಾಸಲೀಲೆ ವಿಡಿಯೊದಲ್ಲಿದ್ದರೆನ್ನಲಾದ ನಟಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಸುದ್ದಿಯಾಗಿತ್ತು. ಶಿವಮೊಗ್ಗ ಜಿಲ್ಲೆಯ ನಟಿ ಘಟನೆಯ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ನಟಿ ದೂರಿದ್ದಾರೆ. ನಾನೇ ಕ್ಯಾಮೆರಾ ಇಟ್ಟು ವಿಡಿಯೊ ಮಾಡಿಸಿದ್ದಾಗಿ ಒಪ್ಪಿಕೊಳ್ಳುವಂತೆ ಬೆದರಿಕೆ ಹಾಕಲಾಗಿದೆ. ನನ್ನ ವಿರುದ್ಧ ಪದೇ ಪದೇ ಆರೋಪ ಮಾಡಲಾಗುತ್ತಿದೆ. ನಾನೇ ವಿಡಿಯೊ ಮಾಡಿಸಿದ್ದಾಗಿ ಒಪ್ಪಿಕೊಳ್ಳದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದೆ. ಈಗ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...