alex Certify
ಕನ್ನಡ ದುನಿಯಾ       Mobile App
       

Kannada Duniya

ಕೊನೆಗೂ ಜೈಲಿನಿಂದ ಹೊರಬಿದ್ದ ಹ್ಯಾರಿಸ್ ಪುತ್ರ ನಲಪಾಡ್

ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 115 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾಗಿದ್ದ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಜೈಲಿನಿಂದ ಹೊರ ಬಿದ್ದಿದ್ದಾರೆ.

ಷರತ್ತುಗಳ ಮೇಲೆ ಹೈಕೋರ್ಟ್, ಮಹಮ್ಮದ್ ನಲಪಾಡ್ ಗೆ ಜಾಮೀನು ನೀಡಿದ್ದು, ಜಾಮೀನು ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕ ಇಂದು ಸಂಜೆ ಮೊಹಮ್ಮದ್ ನಲಪಾಡ್ ಆಡಿ ಕಾರಿನಲ್ಲಿ ಮನೆಗೆ ತೆರಳಿದ್ದಾರೆ.

ಫೆಬ್ರವರಿ 17 ರಂದು ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಫೆಬ್ರವರಿ 19 ರಿಂದ ಜೈಲು ಪಾಲಾಗಿದ್ದರು. ಇವರು ಸಲ್ಲಿಸಿದ್ದ ಜಾಮೀನು ಅರ್ಜಿ ಆನೇಕ ಬಾರಿ ತಿರಸ್ಕೃತಗೊಂಡಿದ್ದು, ಅಂತಿಮವಾಗಿ ಕಠಿಣ ಷರತ್ತುಗಳನ್ನು ಒಡ್ಡುವುದರ ಮೂಲಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...