alex Certify
ಕನ್ನಡ ದುನಿಯಾ       Mobile App
       

Kannada Duniya

7 ವರ್ಷಗಳ ಬಳಿಕ ಯಡಿಯೂರಪ್ಪನವರಿಗೆ ಮತ್ತೆ ಒಲಿದ ಸಿಎಂ ಪಟ್ಟ

ರಾಜ್ಯದ 23 ನೇ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ, ರಾಜಭವನದ ಗಾಜಿನ ಮನೆಯಲ್ಲಿ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಗಳು ನಡೆದಿದ್ದು, 1000 ಕ್ಕೂ ಅಧಿಕ ಮಂದಿ ಗಣ್ಯರಿಗೆ ಆಸನ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಮೂರನೇ ಬಾರಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದು, 7 ವರ್ಷಗಳ ಬಳಿಕ ಮತ್ತೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಈ ಹಿಂದೆ 2007 ರ ನವೆಂಬರ್ 12 ರಂದು ಮತ್ತು 2008 ರ ಮೇ 30 ರಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಮ್ಮ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಲಭಿಸಲಿದ್ದು, ಮೇ 17 ರಂದು ಕಂಠೀರವ ಕ್ರೀಡಾಂಗಣದಲ್ಲಿ ನಾಡಿನ ಜನತೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸುವ ಇರಾದೆ ಹೊಂದಿದ್ದ ಯಡಿಯೂರಪ್ಪನವರು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜಭವನದ ಗಾಜಿನ ಮನೆಯಲ್ಲಿ ಆಯ್ದ ಗಣ್ಯರ ಸಮಕ್ಷಮ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...