alex Certify
ಕನ್ನಡ ದುನಿಯಾ       Mobile App
       

Kannada Duniya

ಐಷಾರಾಮಿ ಕಾರು ಬಳಸದಿರಲು ನಿರ್ಧರಿಸಿದ ಯಡಿಯೂರಪ್ಪ

Toyota_Land_Cruiser_Prado bsyಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲಿಸಲು ಶೀಘ್ರದಲ್ಲಿಯೇ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಘೋಷಿಸಿದ್ದರು.

ಈ ಮಧ್ಯೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸುಮಾರು 1 ಕೋಟಿ ರೂ. ಬೆಲೆ ಬಾಳುವ ಟೊಯೊಟಾ ಕಂಪನಿಯ ಲ್ಯಾಂಡ್ ಕ್ರೂಸರ್ ಪ್ರಾಡೋ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದು, ಇದೇ ಕಾರಿನಲ್ಲಿ ಯಡಿಯೂರಪ್ಪನವರು ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗಿತ್ತು.

ಆದರೆ ಈ ಕುರಿತು ಟೀಕೆಗಳು ಕೇಳಿ ಬರುತ್ತಿದ್ದಂತೆಯೇ ಯಡಿಯೂರಪ್ಪನವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು, ರೈಲಿನ ಮೂಲಕ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಮುರುಗೇಶ್ ನಿರಾಣಿಯವರು ನೀಡಿರುವ ಕಾರನ್ನು ಸ್ಥಳೀಯ ಪ್ರವಾಸಕ್ಕೆ ಬಳಸಿಕೊಳ್ಳಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...