alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಸೇರಲು ವಯೋಮಿತಿ ಮುಗಿದೋಯ್ತು. ಅರ್ಜಿ ಹಾಕಲು ಅವಕಾಶವಿಲ್ಲ ಎಂದುಕೊಂಡವರಿಗೆ ಸಿಹಿ ಸುದ್ದಿ ಇಲ್ಲಿದೆ. ಉದ್ಯೋಗ ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಲು ಸರ್ಕಾರ ಚಿಂತಿಸಿದೆ.

ಸಾಮಾನ್ಯ ವರ್ಗದವರಿಗೆ 35 ವರ್ಷದಿಂದ 37 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷದಿಂದ 40 ವರ್ಷ, ಎಸ್.ಸಿ., ಎಸ್.ಟಿ. ವರ್ಗದವರಿಗೆ 40 ರಿಂದ 42 ವರ್ಷಕ್ಕೆ ವಯೋಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗಳು 3 -4 ವರ್ಷಗಳಿಂದ ಅಂತಿಮಗೊಳ್ಳದ ಕಾರಣ, ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಬೇಕೆಂಬ ಒತ್ತಡ ಕೇಳಿ ಬಂದಿತ್ತು. ಈ ಕುರಿತು ನೇಮಿಸಲಾಗಿದ್ದ ಸಂಪುಟ ಉಪ ಸಮಿತಿ ಕೂಡ ತಾತ್ವಿಕ ಒಪ್ಪಿಗೆ ನೀಡಿದೆ. ವಿಧಾನಪರಿಷತ್ ನಲ್ಲೂ ಚರ್ಚೆಯಾಗಿದೆ.

ಚುನಾವಣೆ ಸಮೀಪದಲ್ಲಿರುವುದರಿಂದ ಎಲ್ಲಾ ವರ್ಗದವರ ಮನಗೆಲ್ಲಲು ಮುಂದಾಗಿರುವ ರಾಜ್ಯ ಸರ್ಕಾರ, ಸರ್ಕಾರಿ ಉದ್ಯೋಗದ ನೇಮಕಾತಿ ವಯೋಮಿತಿಯನ್ನು ಸಡಿಲಿಕೆ ಮಾಡಲು ಚಿಂತಿಸಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...