alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದಲ್ಲಿಯೂ ಶೋಕಾಚರಣೆ

img-20161206-wa0034

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿಯೂ 1 ದಿನದ ಶೋಕಾಚರಣೆಗೆ ಸರ್ಕಾರ ಮುಂದಾಗಿದೆ.

ತಮಿಳುನಾಡಿನಲ್ಲಿ 3 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, 7 ದಿನಗಳ ಕಾಲ ಶೋಕಾಚರಣೆ ನಡೆಯಲಿದೆ. ಜಯಲಲಿತಾ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ. ಹೆಚ್.ಡಿ. ಕುಮಾರಸ್ವಾಮಿ, ಕಾವೇರಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮಾದೇಗೌಡ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಜ್ಯದಲ್ಲಿಯೂ ಅನೇಕ ಪ್ರದೇಶಗಳಲ್ಲಿ ಜಯಲಲಿತಾ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಎ.ಐ.ಎ.ಡಿ.ಎಂ.ಕೆ ಪಕ್ಷದ ಕಾರ್ಯಕರ್ತರು ಸಂತಾಪ ಸಭೆ ನಡೆಸಿ, ಜಯಲಲಿತಾ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...