alex Certify
ಕನ್ನಡ ದುನಿಯಾ       Mobile App
       

Kannada Duniya

ಉಸ್ತುವಾರಿ ಹೊಣೆಯಿಂದ ದಿಗ್ವಿಜಯ್ ಸಿಂಗ್ ಗೆ ಕೊಕ್

digjy

ನವದೆಹಲಿ : ಕರ್ನಾಟಕ ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಕಾಂಗ್ರೆಸ್ ತಯಾರಿ ನಡೆಸಿದೆ.

ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್ ಅವರಿಗೆ ಕೊಕ್ ನೀಡಲಾಗಿದೆ. ದಿಗ್ವಿಜಯ್ ಸಿಂಗ್ ಕರ್ನಾಟಕ ಹಾಗೂ ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು.

ಗೋವಾ ವಿಧಾನಸಭೆ ಚುನಾವಣೆಯಲ್ಲಿನ ಸೋಲು ಮತ್ತು ಸರ್ಕಾರ ರಚನೆಯಲ್ಲಿ ವಿಫಲವಾದ ಹಿನ್ನಲೆಯಲ್ಲಿ ಅವರಿಗೆ ನೀಡಿದ್ದ ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್ ಹಿಂಪಡೆದಿದೆ.

ಚೆಲ್ಲಾ ಕುಮಾರ್ ಅವರಿಗೆ ಗೋವಾ ಕಾಂಗ್ರೆಸ್ ಉಸ್ತುವಾರಿಯನ್ನು ವಹಿಸಲಾಗಿದೆ. ಕರ್ನಾಟಕಕ್ಕೆ ಕೇರಳದ ಸಂಸದ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಅವರೊಂದಿಗೆ ನಾಲ್ವರು ಕಾರ್ಯದರ್ಶಿಗಳ ಉಸ್ತುವಾರಿ ತಂಡವನ್ನು ನೇಮಕ ಮಾಡಲಾಗಿದೆ. ಮಧು ಯಕ್ಷಿ ಗೌಡ್, ಸಾಯಿಲ್ಜನಾಥ್, ಮಾಣಿಕ್ಯಂ ಠಾಕೂರ್, ಪಿ.ಸಿ. ವಿಶ್ವನಾಥ್ ಅವರನ್ನು ಎ.ಐ.ಸಿ.ಸಿ. ಅಧ್ಯಕ್ಷರಾದ ಸೋನಿಯಾಗಾಂಧಿ ಅವರ ಸೂಚನೆಯಂತೆ ನೇಮಕ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...