alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಿಗರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲೇ ನಡೆಯಲಿದೆ ಏರ್ ಶೋ

ಏರ್ ಶೋ ಈ ಬಾರಿ ಬೆಂಗಳೂರಿನ ಬದಲು ಉತ್ತರ ಪ್ರದೇಶದ ಲಕ್ನೋ ಸಮೀಪವಿರುವ ಬಕ್ಷಿ ಕಾ ತಾಲಾಬ್ ಏರ್ ಸ್ಟೇಷನ್ ನಲ್ಲಿ ನಡೆಯಲಿದೆ ಎಂದು ಕೇಳಿ ಬರುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ.

ಎಂದಿನಂತೆ ಈ ಬಾರಿಯೂ ಬೆಂಗಳೂರಿನ ಯಲಹಂಕ ವಾಯು ನೆಲೆಯಲ್ಲಿ ಏರ್ ಶೋ ನಡೆಯಲಿದೆ ಎಂದು ತಿಳಿದು ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಒತ್ತಡಕ್ಕೆ ಮಣಿದು ಏರ್ ಶೋ ಸ್ಥಳಾಂತರಗೊಳ್ಳಲಿದೆ ಎಂದು ಹೇಳಲಾಗಿತ್ತು.

ಆದರೆ ಬಕ್ಷಿ ಕಾ ತಾಲಾಬ್ ವಾಯು ನೆಲೆಯಲ್ಲಿ ಅಗತ್ಯ ಸೌಲಭ್ಯಗಳು ಇಲ್ಲದೆ ಇರುವ ಕಾರಣ ಪ್ರತಿ ಬಾರಿ ನಡೆಸಿದಂತೆ ಬೆಂಗಳೂರಿನ ಯಲಹಂಕ ವಾಯು ನೆಲೆಯಲ್ಲೇ ಈ ಬಾರಿಯೂ ಏರ್ ಶೋ ನಡೆಸಲು ಈಗ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದ್ದು, ಈ ಏರ್ ಶೋ ಫೆಬ್ರವರಿ 20 ರಿಂದ 24 ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...