alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ –ಸಕ್ರಮ ಅರ್ಜಿದಾರರಿಗೆ ಗುಡ್ ನ್ಯೂಸ್

ಮೈಸೂರು: ಸರ್ಕಾರಿ ಜಮೀನು, ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಫೆಬ್ರವರಿ 4 ರ ವರೆಗೆ ಅವಕಾಶ ನೀಡಲಾಗಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಈ ಕುರಿತು ಮಾಹಿತಿ ನೀಡಿದ್ದು, ಅನಧಿಕೃತವಾಗಿ ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಿಸಿಕೊಂಡವರಿಗೆ ತಮ್ಮ ಮನೆಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ 94 ಸಿ.ಸಿ., ಗ್ರಾಮೀಣ ಪ್ರದೇಶಗಳಲ್ಲಿ 94 ಸಿ ಅಡಿ ಅರ್ಜಿ ಸಲ್ಲಿಸಲು ಫೆಬ್ರವರಿ 4 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬಗರ್ ಹುಕುಂ ಸಾಗುವಳಿದಾರರು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಅಕ್ರಮ ಸಕ್ರಮಕ್ಕೆ ಸಲ್ಲಿಸಲಾದ ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂದಿನ ತಿಂಗಳಿಂದ ಹೊಸ ತಾಲ್ಲೂಕುಗಳು ಜಾರಿಗೆ ಬರಲಿವೆ. ಸರ್ವೇಯರ್ ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...