alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ –ಸಕ್ರಮ: ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ಅಕ್ರಮ –ಸಕ್ರಮಕ್ಕೆ ಮತ್ತೊಂದು ಚಾನ್ಸ್ ನೀಡಿರುವ ರಾಜ್ಯ ಸರ್ಕಾರ, ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿನ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಹಿ ಸುದ್ದಿ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್ 94 ಎ, 95 ಕ್ಕೆ ತಿದ್ದುಪಡಿ ಮಾಡಿದೆ. ಹಿಂದೆ 1999 ರ ವರೆಗೆ ಸಾಗುವಳಿ ಮತ್ತು ಮನೆ ಕಟ್ಟಿಕೊಂಡವರಿಗೆ ಮಾತ್ರ ಅಕ್ರಮ –ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ 2005 ರೊಳಗೆ ಮನೆ ಕಟ್ಟಿಕೊಂಡವರೂ ಅರ್ಜಿ ಸಲ್ಲಿಸಬಹುದಾಗಿದ್ದು, ಅವಧಿಯನ್ನು ಇನ್ನೂ 1 ವರ್ಷ ವಿಸ್ತರಿಸಲಾಗಿದೆ.

ವಿಧಾನಸಭೆಯಲ್ಲಿ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ, ಭೂ ಕಂದಾಯ ತಿದ್ದುಪಡಿ ವಿಧೇಯಕ -2018 ಮಂಡಿಸಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. 2005 ರ ವರೆಗೆ ಗ್ರಾಮಾಂತರ ಪ್ರದೇಶದ ಸರ್ಕಾರಿ ಜಾಗದಲ್ಲಿ ಸಾಗುವಳಿ ಮತ್ತು ಮನೆ ನಿರ್ಮಿಸಿಕೊಂಡವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...