alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ- ಕಾಲೇಜು ರಜೆ ಕುರಿತು ಸಿಎಂ ಹೇಳಿದ್ದೇನು?

siddaramaiah_650x400_334500 ಹಾಗೂ 1000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳು ನವೆಂಬರ್ 28 ರ ಸೋಮವಾರದಂದು ದೇಶಾದ್ಯಂತ ‘ಆಕ್ರೋಶ ದಿನ’ ವನ್ನಾಗಿ ಆಚರಿಸಲು ಮುಂದಾಗಿವೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಆಕ್ರೋಶ ದಿನ’ ಕ್ಕೆ ಸರ್ಕಾರದ ಬೆಂಬಲವಿಲ್ಲ. ಆದರೆ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಅಲ್ಲದೇ ಶಾಲಾ- ಕಾಲೇಜುಗಳಿಗೆ ರಜೆ ನೀಡುವುದಿಲ್ಲವೆಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಎಂದಿನಂತೆ ಶಾಲಾ- ಕಾಲೇಜು ಹಾಗೂ ಸರ್ಕಾರಿ ಕಛೇರಿಗಳು ಕಾರ್ಯ ನಿರ್ವಹಿಸಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಕುರಿತು ತನಿಖೆ ನಡೆಸಿದ್ದ ಸಿಬಿಐ ವರದಿ ನೀಡಿರುವುದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯನವರು, ಇದು ಆತ್ಮಹತ್ಯೆ ಪ್ರಕರಣವೆಂದು ನಾವು ಅಂದೇ ಹೇಳಿದ್ದೆವು. ಆದರೆ ರಾಜಕೀಯಕ್ಕಾಗಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಯಾವುದೇ ಸಾವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...