alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

27bg_bgimg_airp_28_2713476f

ಇತ್ತೀಚೆಗೆ ವಿಮಾನ ನಿಲ್ದಾಣಗಳಿಗೆ ಹುಸಿ ಬೆದರಿಕೆ ಕರೆ ಬರುತ್ತಿರುವ ಪ್ರಕರಣ ಹೆಚ್ಚುತ್ತಿದ್ದು, ಈ ನಡುವೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರ ಹೆಸರಿನಲ್ಲಿ ಬಾಂಬ್ ಬೆದರಿಕೆ ಇರುವ ಇ ಮೇಲ್ ಸಂದೇಶ ಬಂದಿದ್ದು, ಕೆಲ ಕಾಲ ಆತಂಕಕ್ಕೆ ಕಾರಣವಾಯಿತು.

ದಾವೂದ್ ಇಬ್ರಾಹಿಂ ಸಹಚರ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಮಂಗಳವಾರ ತಡರಾತ್ರಿ 12.30 ರ ಸಮಯದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ವಿುನಲ್ ವ್ಯವಸ್ಥಾಪಕರ ಇ ಮೇಲ್ ಖಾತೆಗೆ ಈ ಬೆದರಿಕೆ ಸಂದೇಶವನ್ನು ರವಾನಿಸಿದ್ದು, ಇದರಲ್ಲಿ 10 ದಶಲಕ್ಷ ಡಾಲರ್ ನಗದನ್ನು ತಕ್ಷಣವೇ ದಾವೂದ್ ಗ್ಯಾಂಗ್ ​ನ ಭಾರತದ ಕಾರ್ಯದರ್ಶಿ ಖಾತೆಗೆ ಹಾಕಿ. ಇಲ್ಲದಿದ್ದಲ್ಲಿ ವಿಮಾನ ನಿಲ್ದಾಣವನ್ನು ಬಾಂಬ್ ​ನಿಂದ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಶ್ವಾನದಳದೊಂದಿಗೆ ವಿಮಾನ ನಿಲ್ದಾಣವನ್ನು ತಪಾಸಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದು ಮಾತ್ರವಲ್ಲ, ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...