alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಮುಂದೆ ಹಲವು ಬೇಡಿಕೆ ಮುಂದಿಟ್ಟ ಅಂಬಿ?

ಪ್ರಮುಖ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಲವರು ತಮಗೆ ಅವಕಾಶ ಕೈ ತಪ್ಪಿದ್ದಕ್ಕೆ ಕಣ್ಣೀರು ಸುರಿಸುತ್ತಿದ್ದರೆ, ಮಂಡ್ಯ ಶಾಸಕ ಅಂಬರೀಷ್ ಮಾತ್ರ ಟಿಕೆಟ್ ಸಿಕ್ಕರೂ ಬಿ ಫಾರಂ ಪಡೆಯಲು ಮುಂದಾಗದಿರುವುದು ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿದೆ ಎನ್ನಲಾಗಿದೆ.

ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಅಂಬರೀಷ್ ಟಿಕೆಟ್ ಕೋರಿ ಅರ್ಜಿ ಸಲ್ಲಿಸದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಅವರ ಹೆಸರನ್ನು ಪ್ರಕಟಿಸಿದೆ. ಅಂಬರೀಷ್ ಸ್ಪರ್ಧೆಯಿಂದ ಮಂಡ್ಯ ಜಿಲ್ಲೆಯ ಇತರೆ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಅನುಕೂಲವಾಗುವುದೆಂಬ ಲೆಕ್ಕಾಚಾರ ಇದರ ಹಿಂದಿದೆ.

ನಾಮಪತ್ರ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಆದರೆ ಅಂಬರೀಷ್ ಮಾತ್ರ ಬಿ ಫಾರಂ ಪಡೆಯದೆ ಕುತೂಹಲ ಮೂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಈ ಹಿಂದೆ ಮಾತುಕತೆ ನಡೆಸಿದ್ದು, ಬಳಿಕ ಸಚಿವ ಕೆ.ಜೆ. ಜಾರ್ಜ್ ಅಂಬರೀಷ್ ನಿವಾಸಕ್ಕೆ ಭೇಟಿ ನೀಡಿ ಮಂಡ್ಯಕ್ಕೆ ತೆರಳಿ ನಾಮಪತ್ರ ಸಲ್ಲಿಸುವಂತೆ ಮನವೊಲಿಸುವ ಯತ್ನ ಮಾಡಿದ್ದರು.

ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಅಂಬರೀಷ್ ಮುಗುಮ್ಮಾಗೆ ಉಳಿದಿದ್ದು, ಈಗ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರೇ ಅಂಬರೀಷ್ ಜೊತೆ ಮಾತುಕತೆ ನಡೆಸಿ ಮನವೊಲಿಸಲು ಮುಂದಾಗಿದ್ದಾರೆನ್ನಲಾಗಿದೆ. ತಮ್ಮ ಕೆಲ ಬೇಡಿಕೆಗಳ ಕುರಿತು ಅಂಬರೀಷ್ ಸಚಿವ ಜಾರ್ಜ್ ಬಳಿ ಪ್ರಸ್ತಾಪಿಸಿದ್ದು, ಇದಕ್ಕೆ ಒಪ್ಪಿಗೆ ನೀಡಿದರೆ ಮಾತ್ರ ಚುನಾವಣೆಯಲ್ಲಿ ಕಣಕ್ಕಿಳಿಯುವುದಾಗಿ ಷರತ್ತು ಒಡ್ಡಿದ್ದಾರೆನ್ನಲಾಗಿದೆ. ವೇಣುಗೋಪಾಲ್ ರೊಂದಿಗಿನ ಮಾತುಕತೆ ಬಳಿಕ ಅಂಬಿ ಕಣಕ್ಕಿಳಿಯಲಿದ್ದರಾ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...