alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಬರೀಶ್ ಗೆ ‘ಕೈ’ ಟಿಕೇಟ್ ನೀಡಿದ್ದಕ್ಕೆ ಆಕ್ರೋಶ, ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೇಟ್ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಈ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದ ಗಣಿಗ ರವಿಕುಮಾರ್ ಬೆಂಬಲಿಗರು ಮಂಡ್ಯ ಕಾಂಗ್ರೆಸ್ ಕಛೇರಿಯಲ್ಲಿ ದಾಂಧಲೆ ನಡೆಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅರೆಬೆತ್ತಲೆ ಕುಳಿತು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ನಂತರ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿದ್ದ ಕುರ್ಚಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಬರೀಶ್ ಕಾಂಗ್ರೆಸ್ ಟಿಕೇಟ್ ಗೆ ಅರ್ಜಿ ಸಲ್ಲಿಸದಿದ್ದರೂ ಅವರಿಗೆ ಟಿಕೇಟ್ ನೀಡಲಾಗಿದೆ. ಗಣಿಗ ರವಿಕುಮಾರ್ ಈ ಹಿಂದಿನಿಂದಲೂ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಟಿಕೇಟ್ ಕೋರಿ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೂ ಇದನ್ನು ಕಡೆಗಣಿಸಿ ಅಂಬರೀಶ್ ಅವರಿಗೆ ಟಿಕೇಟ್ ನೀಡಲಾಗಿದೆ ಎಂದು ಬೆಂಬಲಿಗರು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...