alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಬರೀಶ್ ಹುಟ್ಟೂರಿನಲ್ಲಿ ಅಭಿಮಾನಿಗಳಿಂದ ಪುಣ್ಯ ತಿಥಿ

ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಇಂದು ತಿಥಿ ಕಾರ್ಯ ನೆರವೇರಿಸುತ್ತಿದ್ದಾರೆ.

ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನೆರವೇರಿದ್ದು, ಕೆಲ ಅಭಿಮಾನಿಗಳು ಕೇಶಮುಂಡನ ಮಾಡಿಸಿಕೊಂಡು ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಗ್ರಾಮಸ್ಥರು ಹಾಗೂ ಅಭಿಮಾನಿಗಳಿಗಾಗಿ ಸಸ್ಯಹಾರಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.

ದೊಡ್ಡರಸಿನಕೆರೆ ಮಾತ್ರವಲ್ಲದೆ ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಇಂದು ಅಂಬರೀಶ್ ಅವರ ತಿಥಿ ಕಾರ್ಯ ನಡೆಯುತ್ತಿದ್ದು, ಕೆಲವೆಡೆ ಮಾಂಸಾಹಾರ ಊಟ ತಯಾರಿಸಿ ಬಡಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...