alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸ್ತಾರಾ ರೆಬೆಲ್ ಸ್ಟಾರ್ ಅಂಬರೀಶ್?

2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಶುಕ್ರವಾರ ಇಡೀ ದಿನ ಕೆಪಿಸಿಸಿ ಕಛೇರಿಯಲ್ಲಿ ಸರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕೆಲ ಪ್ರಮುಖ ನಾಯಕರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನವೊಲಿಸಲು ನಿರ್ಧರಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಅಂಬರೀಶ್ ತಟಸ್ಥ ನಿಲುವು ತಾಳಿದ ಕಾರಣ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲನ್ನಪ್ಪಲು ಕಾರಣವಾಯಿತೆಂಬುದನ್ನು ಮನಗಂಡಿರುವ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಅಂಬರೀಶ್ ಅವರ ಮನವೊಲಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ.

ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಅಂಬರೀಶ್ ಕಣಕ್ಕಿಳಿದರೆ ಜೆಡಿಎಸ್ ಸಹ ಬೆಂಬಲ ಸೂಚಿಸಲಿದೆ. ಹೀಗಾಗಿ ಅವರನ್ನು ಕಣಕ್ಕಿಳಿಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಿದ್ದರಾಮಯ್ಯನವರಿಗೆ ನೀಡಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...