alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಡ್ಯ ಕುತೂಹಲಕ್ಕೆ ತೆರೆ, ಅಂಬಿ ಬದಲಿಗೆ ರವಿಗೆ ಟಿಕೆಟ್

ಮಂಡ್ಯ ವಿಧಾನಸಭೆ ಕ್ಷೇತ್ರದಲ್ಲಿ ನಟ ಅಂಬರೀಶ್ ಸ್ಪರ್ಧೆ ಮಾಡುತ್ತಿಲ್ಲ. ಅವರ ಬದಲಿಗೆ ರವಿಕುಮಾರ್ ಗಣಿಗ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.

ಕೇಳದಿದ್ದರೂ ಟಿಕೆಟ್ ನೀಡಿ, ಬಿ ಫಾರಂ ಕೊಡಲು ಮುಂದಾಗಿದ್ದ ಕಾಂಗ್ರೆಸ್ ನಾಯಕರಿಗೆ ಅಂಬರೀಶ್ ನಡೆ ಮುಜುಗರ ತಂದಿತ್ತು. ಅಂಬರೀಶ್ ಅವರನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನಗಳು ವಿಫಲವಾದ ಬಳಿಕ, ಸಿ.ಎಂ., ಅಂಬರೀಶ್ ಅವರನ್ನು ಕೊನೆಯ ಬಾರಿ ಸಂಪರ್ಕಿಸಿ ಬೇರೆಯವರಿಗೆ ಟಿಕೆಟ್ ನೀಡುವಂತೆ ತಿಳಿಸಿದ್ದಾರೆ.

ಅದರಂತೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಿ ರವಿಕುಮಾರ್ ಗಣಿಗ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದಾರೆ. ಅಮರಾವತಿ ಚಂದ್ರಶೇಖರ್ ಕೂಡ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರಾದರೂ, ರವಿಕುಮಾರ್ ಅವರಿಗೆ ಟಿಕೆಟ್ ನೀಡಲಿದ್ದು, ಅವರೇ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...