alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೆರಿಕಕ್ಕೆ ಮಕ್ಕಳ ಸಾಗಾಣೆ, ಬಯಲಾಯ್ತು ರಹಸ್ಯ

crime 78 nmklop

ಬೆಂಗಳೂರು: ನಕಲಿ ವೀಸಾ, ದಾಖಲಾತಿ ಸೃಷ್ಟಿಸಿ ಮಕ್ಕಳನ್ನು ಅಮೆರಿಕಕ್ಕೆ ಕಳ್ಳಸಾಗಾಣೆ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಪೊಲೀಸರು, ಬರೋಬ್ಬರಿ 16 ಮಂದಿಯನ್ನು ಬಂಧಿಸಿದ್ದಾರೆ. ಕಳೆದ ಒಂದು ವರ್ಷದಿಂದ ಜಾಲದ ಬಗ್ಗೆ ನಿಗಾವಹಿಸಿ ತನಿಖೆ ಕೈಗೊಳ್ಳಲಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಲಾಗಿದೆ.

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರಿಗೆ ಇಲ್ಲಿರುವ ಮಕ್ಕಳನ್ನು ತಲುಪಿಸುವ ಕೆಲಸವನ್ನು ವ್ಯವಸ್ಥಿತವಾಗಿ ಈ ತಂಡ ಮಾಡುತ್ತಿತ್ತು. ನಕಲಿ ತಂದೆ, ತಾಯಿ, ಕುಟುಂಬಗಳನ್ನು ಸೃಷ್ಟಿಸಲಾಗುತ್ತಿತ್ತು. ಈ ಗ್ಯಾಂಗ್ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಕಾರಣ, ಯಾರಿಗೂ ಅನುಮಾನ ಬಂದಿರಲಿಲ್ಲ. ಇಂತಹ ಮಾಹಿತಿ ಬಂದ ನಂತರ ಪತ್ತೆಗೆ 14 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪಾಸ್ ಪೋರ್ಟ್ ಕಚೇರಿ ಸೇರಿದಂತೆ ವಿವಿಧೆಡೆ ದಾಖಲಾತಿ ಪಡೆಯುವ ಕಚೇರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿತ್ತು.

ಈ ಗ್ಯಾಂಗ್ ನವರು ವಿವಿಧೆಡೆಯಿಂದ ಮಕ್ಕಳನ್ನು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದರು. ಅವರಿಗೆ ವ್ಯವಸ್ಥಿತವಾಗಿ ತರಬೇತಿ ನೀಡುತ್ತಿದ್ದರು. ನಕಲಿ ದಾಖಲೆ ಮೂಲಕ, ನಕಲಿ ತಂದೆ- ತಾಯಿಗಳೊಂದಿಗೆ ಅವರನ್ನು ಅಮೆರಿಕಕ್ಕೆ ಕಳುಹಿಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಹರಿಶೇಖರನ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...