alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭೆ ಚುನಾವಣೆಗೆ ಅಮಿತ್ ಶಾ ರಣತಂತ್ರ

ಬೆಂಗಳೂರು: ಬಿ.ಜೆ.ಪಿ. ಅಧ್ಯಕ್ಷರಾದ ಬಳಿಕ ಅನೇಕ ರಾಜ್ಯಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ ಪ್ರಕಟವಾದ ದಿನವೇ ಮುಂದಿನ ಗುರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದಾಗಿದೆ ಎಂದು ಅಮಿತ್ ಶಾ ಹೇಳಿದ್ದರು.

ಈಗಾಗಲೇ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಚುನಾವಣಾ ತಾಲೀಮು ಆರಂಭಿಸಲಾಗಿದೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆ ನಡೆದಿದೆ.

ಇದೇ ವೇಳೆ ಮಹದಾಯಿ, ಲಿಂಗಾಯತ ಧರ್ಮ ಮೊದಲಾದ ವಿಚಾರಗಳ ಕುರಿತಾಗಿ ಚರ್ಚೆ ನಡೆದಿದೆ. ಅಮಿತ್ ಶಾ ಅವರು ರಾಜ್ಯದ ರಾಜಕೀಯ ಸ್ಥಿತಿಗತಿಗಳು, ಪಕ್ಷದ ಸಂಘಟನೆ, ಚುನಾವಣಾ ತಯಾರಿ ಕುರಿತಾಗಿ ತಮ್ಮ ಆಪ್ತ ಭೂಪೇಂದ್ರ ಯಾದವ್ ಮೂಲಕ ವರದಿ ಪಡೆದುಕೊಂಡಿದ್ದಾರೆ.

ಇಂದು ಬೆಂಗಳೂರಿಗೆ ಆಗಮಿಸಿ ಯಲಹಂಕದ ರೆಸಾರ್ಟ್ ನಲ್ಲಿ ಚುನಾವಣಾ ತಂತ್ರಗಾರಿಕೆ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ. ಕಳೆದ ಸಲ ಬಂದಾಗ ನೀಡಿದ್ದ ಸೂಚನೆಗಳನ್ನು ಪಾಲಿಸಲಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಿದ್ದು, ಎಲ್ಲಾ ಮೋರ್ಚಾಗಳ ಮುಖಂಡರು, ಕೋರ್ ಕಮಿಟಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...