alex Certify
ಕನ್ನಡ ದುನಿಯಾ       Mobile App
       

Kannada Duniya

ಅಮಿತ್ ಶಾ ಆಗಮನ, ಬಿ.ಜೆ.ಪಿ. ಯಲ್ಲಿ ಸಂಚಲನ

amit-bjp-rajy

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದಿನಿಂದ 3 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, 25 ಕ್ಕೂ ಅಧಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಅಮಿತ್ ಶಾ ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಲು ಕಾರ್ಯತಂತ್ರ ರೂಪಿಸಿದ್ದು, ಈ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ಸಾಧಕರು, ಗಣ್ಯರೊಂದಿಗೆ ಭೇಟಿ, ಪಕ್ಷದ ಪ್ರಮುಖರೊಂದಿಗೆ ಸಭೆ, ಮಠಾಧೀಶರ ಭೇಟಿ ಹೀಗೆ ಹಲವು ಕಾರ್ಯಕ್ರಮಗಳನ್ನು ನಿಗದಿಯಾಗಿವೆ.

ಅಮಿತ್ ಶಾ ಭೇಟಿ ನೀಡುವ ಮೊದಲೇ ರಾಜ್ಯದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆ, ಪಕ್ಷದ ಬೆಳವಣಿಗೆಗಳ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತಾಗಿಯೂ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿ ಸಲಹೆ, ಸೂಚನೆ ನೀಡಲಿದ್ದಾರೆ. ಉತ್ತರ ಪ್ರದೇಶದಲ್ಲಿ ಅಮಿತ್ ಶಾ ಅವರ ತಂತ್ರಗಾರಿಕೆ ಯಶಸ್ವಿಯಾಗಿದ್ದು, ಬಿ.ಜೆ.ಪಿ. ಸರ್ಕಾರ ಆಡಳಿತಕ್ಕೆ ಬಂದಿದೆ.

ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಈಗಿನಿಂದಲೇ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಕುರಿತಾಗಿ ಅಮಿತ್ ಶಾ ರೂಪುರೇಷೆ ಸಿದ್ಧಪಡಿಸಿ ಕಾರ್ಯರೂಪಕ್ಕೆ ತರಲಿದ್ದಾರೆ. 3 ದಿನಗಳ ಕಾಲ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...