alex Certify
ಕನ್ನಡ ದುನಿಯಾ       Mobile App
       

Kannada Duniya

ಆಂತರಿಕ ಕಚ್ಚಾಟಕ್ಕೆ ಅಂತ್ಯ ಹಾಡಿದ ಅಮಿತ್ ಶಾ

ಶಿವಮೊಗ್ಗ: ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಡೆದ ಭೋಜನಕೂಟದಲ್ಲಿ ಅಮಿತ್ ಶಾ, ಇಬ್ಬರೂ ನಾಯಕರನ್ನು ಕೂರಿಸಿಕೊಂಡು ಸಂಧಾನ ಮಾಡಿಸಿದ್ದಾರೆ. ಭೋಜನದ ಬಳಿಕ ಸುದ್ದಿಗೋಷ್ಠಿ ನಡೆಸಿದ ಅಮಿತ್ ಶಾ, ಇಬ್ಬರೂ ನಾಯಕರ ಕೈ ಹಿಡಿದು ಒಗ್ಗಟ್ಟಿನಲ್ಲಿ ಬಲವಿದೆ ಎಂದು ಹೇಳಿದ್ದಾರೆ. ಈ ಮೂಲಕ ಪಕ್ಷದ ಗೆಲುವಿಗೆ ಮುಳುವಾಗಿದ್ದ ಆಂತರಿಕ ಬಿಕ್ಕಟ್ಟು ಶಮನ ಮಾಡಿದ್ದಾರೆ.

ನಿಗದಿತ ಕಾರ್ಯಕ್ರಮಗಳನ್ನು ಮುಗಿಸಿ ಶಿವಮೊಗ್ಗ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಅಮಿತ್ ಶಾ ಆಗಮಿಸಿದ್ದಾರೆ. ಭೋಜನವಾದ ಬಳಿಕ ಅಲ್ಲಿದ್ದ ನಾಯಕರನ್ನು ಕಳಿಸಿದ ಅಮಿತ್ ಶಾ ಅವರು, ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ, ಈಶ್ವರಪ್ಪ, ಅನಂತ್ ಕುಮಾರ್, ಬಿ.ಎಸ್. ಸಂತೋಷ್, ಮುರಳೀಧರರಾವ್ ಮೊದಲಾದವರೊಂದಿಗೆ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸುವುದು ನಿಮ್ಮಿಬ್ಬರ ಜವಾಬ್ದಾರಿಯಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ನೀವೆಲ್ಲಾ ಒಟ್ಟಾಗಿರಬೇಕೆಂದು ಹೇಳಿದ್ದು, ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪನವರ ಕೈಹಿಡಿದು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...