alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಬಿಜೆಪಿ ನಾಯಕರ ವಿರುದ್ದ ಅಮಿತ್ ಷಾ ಗರಂ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಖಾಲಿ ಕುರ್ಚಿಗಳನ್ನು ಕಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಜ್ಯ ಬಿಜೆಪಿ ನಾಯಕರ ವಿರುದ್ದ ಕೆಂಡಾಮಂಡಲರಾದ ಘಟನೆ ನಡೆದಿದೆ.

ಟ್ರಾಫಿಕ್ ಜಾಮ್ ನಿಂದಾಗಿ ಕಾರಿನಲ್ಲಿ ಸಮಾವೇಶದ ಸ್ಥಳಕ್ಕೆ ಬರಲಾಗದ ಅಮಿತ್ ಷಾ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲೇ ಗಂಟೆಗಳ ಕಾಲ ಕಾದು ಕುಳಿತುಕೊಳ್ಳುವಂತಾಗಿತ್ತು. ಕೊನೆಗೂ ಸಮಾವೇಶದ ಸ್ಥಳಕ್ಕೆ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಅಮಿತ್ ಷಾ ಆಗಮಿಸಿದರು.

ವೇದಿಕೆ ಮೇಲೇರಿದ ಅಮಿತ್ ಷಾ ಖಾಲಿ ಕುರ್ಚಿಗಳನ್ನು ಕಂಡು ಕೆಂಡಾಮಂಡಲಗೊಂಡರಲ್ಲದೇ ಕೇಂದ್ರ ಸಚಿವ ಸದಾನಂದ ಗೌಡರನ್ನು ಕರೆದು ಮೈದಾನದ ಹೊರಗೆ ನಿಂತಿರುವ ಬಿಜೆಪಿ ಕಾರ್ಯಕರ್ತರನ್ನು ಒಳಗೆ ಕರೆಯುವಂತೆ ತಾಕೀತು ಮಾಡಿದರು. ಸದಾನಂದ ಗೌಡ ಕೂಡಲೇ ಪ್ರಮುಖ ಕಾರ್ಯಕರ್ತರಿಗೆ ಈ ಕುರಿತು ಸೂಚನೆ ನೀಡಿದ್ದು, ಮಾಜಿ ಸಚಿವ ಸೋಮಣ್ಣ ಸೇರಿದಂತೆ ಹಲವರು ಮೈದಾನದ ಹೊರಗೆ ತೆರಳಿ ಅಲ್ಲಿ ಕುಳಿತಿದ್ದ ಕಾರ್ಯಕರ್ತರನ್ನು ಒಳ ಹೋಗುವಂತೆ ಮನವಿ ಮಾಡುತ್ತಿದ್ದ ದೃಶ್ಯ ಕಂಡು ಬಂದಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...