alex Certify
ಕನ್ನಡ ದುನಿಯಾ       Mobile App
       

Kannada Duniya

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್ ಶಾ

ಮಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ. ಅನಾರೋಗ್ಯದ ಕಾರಣ ನಿಗದಿತ ಸಮಯಕ್ಕಿಂತ ವಿಳಂಬವಾಗಿ ಮಂಗಳೂರು ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.

ಮಂಗಳೂರು ಕೆಂಜಾರುವಿನಲ್ಲಿ ಅಮಿತ್ ಶಾ ಭಾಷಣಕ್ಕೆ ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ. ಅಮಿತ್ ಶಾ ಕೆಂಜಾರು ಕಾರ್ಯಕ್ರಮಕ್ಕೆ ಬರದೇ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.

ಮಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಪಕ್ಷದ ನಾಯಕರು, ಮುಖಂಡರು ಅದ್ಧೂರಿ ಸ್ವಾಗತ ನೀಡಿದ್ದಾರೆ. ಅಮಿತ್ ಶಾ ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ನೆರವೇರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...