alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಧರ್ಮ, ಅಮಿತ್ ಶಾ ವಿರುದ್ಧ ಪ್ರತಿಭಟನೆಗೆ ಮುಂದಾದವರು ವಶಕ್ಕೆ

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆಗೆ ಮುಂದಾದ ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಅಮಿತ್ ಶಾ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ, ಬಸವೇಶ್ವರರ ಜಯಂತಿ ಹಿನ್ನಲೆಯಲ್ಲಿ ಚಾಲುಕ್ಯ ವೃತ್ತದಲ್ಲಿನ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾಗಿದ್ದು, ಇದಕ್ಕಿಂತ ಮೊದಲೇ ಪ್ರತಿಭಟನಾಕಾರರು ಸ್ಥಳಕ್ಕೆ ಆಗಮಿಸಿದ್ದಾರೆ.

ಹಿಂದೆ ಹಿಂದೂ ಧರ್ಮ ವಿಭಜನೆಗೆ ಅವಕಾಶ ನೀಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದು, ಲಿಂಗಾಯತ ಧರ್ಮದ ವಿಚಾರದಲ್ಲಿ ಅವರು ತಮ್ಮ ನಿಲುವು ತಿಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಗೊಂದಲವಾಗಬಹುದೆಂಬ ಕಾರಣಕ್ಕೆ ಪ್ರತಿಭಟನೆಗೆ ಮುಂದಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...