alex Certify
ಕನ್ನಡ ದುನಿಯಾ       Mobile App
       

Kannada Duniya

”ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ”

th28_south_amit_shah-q

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಎಲ್ಲ ಸರ್ಕಾರಗಳೂ ಆರೋಪ ಬಂದಾಗ ತಲೆ ತಗ್ಗಿಸುತ್ತವೆ. ಆದ್ರೆ ಸಿದ್ದರಾಮಯ್ಯ ಸರ್ಕಾರ ಮೆಡಲ್ ನಂತೆ ಸ್ವೀಕರಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಅನುದಾನ ಬಂದಿದೆ. ಆದ್ರೆ ಬಡವರು ಹಾಗೂ ರೈತರಿಗೆ ಅದು ತಲುಪಿಲ್ಲ. ಈ ಹಣವೆಲ್ಲ ಎಲ್ಲಿ ಹೋಯ್ತು? ನನ್ನೆಲ್ಲ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಉತ್ತರ ನೀಡಬೇಕಿದೆ ಎಂದು ಅಮಿತ್ ಶಾ ಗುಡುಗಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಮುನ್ನೆಡೆಸಲಾಗುವುದು. ಒಂದು ರಾಜ್ಯ ಒಂದು ರಣತಂತ್ರವೆಂದು ಅಮಿತ್ ಶಾ ಹೇಳಿದ್ದಾರೆ.

ಮೋದಿ ಸರ್ಕಾರ ಬಡವರ ಪರ ಸರ್ಕಾರವಾಗಿದೆ. ಭ್ರಷ್ಟರು, ಕಾಳಧನದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ. ಮೂರು ವರ್ಷಗಳಲ್ಲಿ ಭ್ರಷ್ಟಾಚಾರದ ಬಗ್ಗೆ ನಮ್ಮ ಸರ್ಕಾರದ ಮೇಲೆ ಯಾವುದೇ ಆರೋಪವಿಲ್ಲ. ಜಾತಿವಾದ, ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...