alex Certify
ಕನ್ನಡ ದುನಿಯಾ       Mobile App
       

Kannada Duniya

ಈಶ್ವರಪ್ಪ-ಯಡಿಯೂರಪ್ಪರನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ

amit-shah-in-karnataka-twitter-650_650x400_71502566813

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಣ್ಣು ಈಗ ಕರ್ನಾಟಕದ ಮೇಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಮಿತ್ ಶಾ ಪಣತೊಟ್ಟಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪನವರನ್ನು ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಾಧ್ಯಮಗಳ ವರದಿ ಪ್ರಕಾರ, ಅಕ್ಟೋಬರ್ ನಿಂದ ರಾಜ್ಯದಲ್ಲಿಯೇ ಅಮಿತ್ ಶಾ ವಾಸ್ತವ್ಯ ಹೂಡಲಿದ್ದಾರೆ. ಬಹಿರಂಗ ಸಮಾವೇಷ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸದ್ಯ ಬೆಂಗಳೂರಿಗೆ ಬಂದಿರುವ ಶಾ, ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ. ಈಶ್ವರಪ್ಪ ಪಿಎ ಕಿಡ್ನಪ್ ಯತ್ನ ಪ್ರಕರಣದ ಬಗ್ಗೆ ನನಗೆ ಗೊತ್ತು. ಪಿಎ ಗಲಾಟೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ. ಸದ್ದಿಲ್ಲದೆ ಕಾಂಗ್ರೆಸ್ ಇದ್ರ ಉಪಯೋಗ ಪಡೆಯುತ್ತಿದೆ. ಇದ್ರಿಂದ ಬಿಜೆಪಿ ವೇಗಕ್ಕೆ ಹಿನ್ನೆಡೆಯಾಗಿದೆ ಎಂದಿದ್ದಾರೆ ಅಮಿತ್ ಶಾ.

ಮೂರು ದಿನಗಳ ಪ್ರವಾಸದ ಮೇಲೆ ಶನಿವಾರ ಬೆಂಗಳೂರಿಗೆ ಬಂದಿರುವ ಅಮಿತ್ ಶಾ ಇಂದು ರಾತ್ರಿ  8.30ಕ್ಕೆ ಕೋರ್ ಕಮಿಟಿ ಸಭೆ ಕರೆದಿರುವ ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...