alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಗ್ರೆಸ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಅಮಿತ್ ಶಾ’

ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ರಾಜ್ಯಪ್ರವಾಸದಲ್ಲಿರುವ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಆಡಿದ ಮಾತೊಂದು ಭಾರೀ ಚರ್ಚೆಗೆ ಕಾರಣವಾಗಿದೆ.

ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದ್ರೆ ಹೋಯ್ತು ಎನ್ನುವಂತೆ ಆಕಸ್ಮಿಕವಾಗಿ ಬಿ.ಎಸ್.ವೈ. ಕುರಿತಾಗಿ ಅಮಿತ್ ಶಾ ನೀಡಿದ ಹೇಳಿಕೆ ವೈರಲ್ ಆಗಿದೆ. ಚುನಾವಣೆ ವೇಳೆ ಆಗಿರುವುದರಿಂದ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಬಾಯಿತಪ್ಪಿ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ನಂ. 1 ಭ್ರಷ್ಟ ಸರ್ಕಾರ ಪಟ್ಟ ಕೊಡಬಹುದು ಎಂದು ಹೇಳಿದ್ದಾರೆ. ಪಕ್ಕದಲ್ಲೇ ಕುಳಿತಿದ್ದ ಸಂಸದ ಪ್ರಹ್ಲಾದ್ ಜೋಶಿ, ಸಿದ್ಧರಾಮಯ್ಯ ಎಂದು ಹೇಳಿದ್ದು ಆಗ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ.

ಮಾತನಾಡುವ ಸಂದರ್ಭದಲ್ಲಿ ಬಾಯಿತಪ್ಪಿ ಹೇಳಿಕೆ ನೀಡುವುದು ಸಹಜವಾದರೂ, ಅಮಿತ್ ಶಾ ಅವರು, ಯಡಿಯೂರಪ್ಪರನ್ನು ಭ್ರಷ್ಟ ಸರ್ಕಾರವೆಂದು ಟೀಕಿಸಿದ್ದ ಹೇಳಿಕೆ ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ಅವರು ನಮಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ.ಯನ್ನು ಟೀಕಿಸಲು ಅಮಿತ್ ಶಾ ಗಿಫ್ಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ನಿಜವನ್ನೇ ಹೇಳಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅಮಿತ್ ಶಾ ಅವರು ತಡವಾಗಿಯಾದರೂ, ಬಿ.ಎಸ್.ವೈ. ಬಗ್ಗೆ ಸತ್ಯವನ್ನು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವ್ಯಂಗ್ಯವಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...