alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಅಮಿತ್ ಶಾ ಆಗಮನ, ಗೆಲುವಿಗೆ ಹೊಸ ರಣತಂತ್ರ

ಈಗಾಗಲೇ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಇಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿರುವ ಶಾ, 2 ದಿನಗಳ ಕಾಲ ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಸಿನ ಪ್ರವಾಸ ನಡೆಸಲಿದ್ದಾರೆ.

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿರುವ ಅವರು, ನಂತರ ಧಾರವಾಡದ ದ.ರಾ. ಬೇಂದ್ರೆ ಸ್ಮಾರಕ ಸ್ಥಳ ಸಾಧನಕೇರಿಗೆ ಭೇಟಿ ನೀಡುವರು. ರೋಣದಲ್ಲಿ ನಡೆಯಲಿರುವ ಮುಷ್ಟಿಧಾನ್ಯ ಸಂಗ್ರಹ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಧಾರವಾಡ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆ, ಹುಬ್ಬಳ್ಳಿಯಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ. ಗೋಕಾಕ್ ನಲ್ಲಿ ರೋಡ್ ಶೋ, ಬೆಳಗಾವಿ ಕೆ.ಎಲ್.ಇ. ವೈದ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಹೀಗೆ ಇಂದು ರಾತ್ರಿ ಆಗಮಿಸಲಿರುವ ಶಾ 2 ದಿನಗಳ ಕಾಲ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...