alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶೇಷ ಹೆಲಿಕಾಪ್ಟರ್ ಮೂಲಕ ಅಮಿತ್ ಶಾ ಆಗಮನ

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಉದ್ಘಾಟನೆಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಟ್ರಾಫಿಕ್ ಜಾಮ್ ನಿಂದಾಗಿ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲೇ ಗಂಟೆಗಳ ಕಾಲ ಕಾದು ಕುಳಿತುಕೊಳ್ಳುವಂತಾಗಿತ್ತು.

ಬಳಿಕ ವಿಮಾನ ನಿಲ್ದಾಣದಿಂದ ಪರಿವರ್ತನಾ ಯಾತ್ರೆ ಸಮಾವೇಶದ ಸ್ಥಳಕ್ಕೆ ಅಮಿತ್ ಷಾ ವಿಶೇಷ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಅಮಿತ್ ಷಾ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯ ಅರಿವಿದ್ದರೂ ಸಮರ್ಪಕ ವ್ಯವಸ್ಥೆ ಮಾಡದಿರುವುದಕ್ಕೆ ರಾಜ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆಂದು ಹೇಳಲಾಗಿದೆ.

ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ರಾಜ್ಯದ ವಿವಿಧ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳಲ್ಲಿ ಆಗಮಿಸಿರುವ ಕಾರಣ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...