alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದಲ್ಲಿ 3 ದಿನ ಅಮಿತ್ ಶಾ ರಣತಂತ್ರ

amit-shd

ಬೆಂಗಳೂರು: ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಸ್ಟ್ 12 ರಿಂದ 3 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ತಮ್ಮ 3 ದಿನದ ಪ್ರವಾಸದ ಸಂದರ್ಭದಲ್ಲಿ ಅಮಿತ್ ಶಾ 25 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಮಠಾಧೀಶರು, ಪ್ರಮುಖರು ಸೇರಿ ಹಲವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಆಗಸ್ಟ್ 12 ರಂದು ಬಿ.ಜೆ.ಪಿ. ಕಚೇರಿಯಲ್ಲಿ ಗ್ರಂಥಾಲಯ ಉದ್ಘಾಟನೆ, ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರೊಂದಿಗೆ ಸಮಾಜದ ಗಣ್ಯರು, ಬುದ್ಧಿಜೀವಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಆಗಸ್ಟ್ 13 ರಂದು ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿ ರವಿಶಂಕರ್ ಗುರೂಜಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಆಗಸ್ಟ್ 14 ರಂದು ವಿಸ್ತಾರಕ್ ಕಾರ್ಯಕರ್ತರ ಸಭೆ, ವಿವಿಧ ಮುಖಂಡರು, ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗಳಿಸಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...